Index   ವಚನ - 1089    Search  
 
ಕಾಯದೊಳಗೆ ಕಾಯವಾಗಿ, ಪ್ರಾಣದೊಳಗೆ ಪ್ರಾಣವಾಗಿ, ಮನದೊಳಗೆ ಮನವಾಗಿ, ಭಾವದೊಳಗೆ ಭಾವವಾಗಿ ಅರಿವಿನೊಳಗೆ ಅರಿವಿನ ತಿರುಳಾಗಿ, ಮರಹು ಮಾರಡೆಯಿಲ್ಲದೆ. ನಿಜಪದವು ಸಾಧ್ಯವಾದ ಬಳಿಕ ಆವುದು ವರ್ಮ, ಆವುದು ಕರ್ಮ? ಆವುದು ಬೋಧೆ, ಆವುದು ಸಂಬಂಧ? ನಾ ಹೇಳಲಿಲ್ಲ ನೀ ಕೇಳಲಿಲ್ಲ! ಅದೇನು ಕಾರಣವೆಂದಡೆ ಬೆಸಗೊಂಬಡೆ ತೆರಹಿಲ್ಲವಾಗಿ! ಗುಹೇಶ್ವರಲಿಂಗದಲ್ಲಿ ತೆರೆಮರೆ ಆವುದು ಹೇಳಯ್ಯಾ ಬಸವಣ್ಣಾ?