Index   ವಚನ - 43    Search  
 
ಅನಂತ ತಪಸ್ಸಿನ ಫಲ ಒದಗಿ, ಗುರುಕರುಣದಿಂದ ಚಿದ್ಘನಲಿಂಗಾಂಗಸಂಬಂಧ ವೀರಶೈವೋದ್ಧಾರಕರಾದ ಮಹಾಗಣ ಪ್ರಸನ್ನಪ್ರಸಾದವೆನಿಸುವ ವಚನಸಾರಾಮೃತನುಭಾವಸುಖಮಂ ಸವಿಸವಿದುಂಡುಪವಾಸಿ ಬಳಸಿಬ್ರಹ್ಮಚಾರಿಯಾಗಲರಿಯದೆ ಒಬ್ಬರಿಗೆ ಹುಟ್ಟಿ,ಒಬ್ಬರಿಗೆ ಹೆಸರ ಹೇಳಿ, ಶಿವಾಚಾರಮಾರ್ಗಸಂಪನ್ನರೆನಿಸಿ, ತಮ್ಮ ತಾವರಿಯದೆ, ಹಲವು ಮತದವರ ಎಂಜಲಶಾಸ್ತ್ರವಿಡಿದು, ಶೈವಕರ್ಮೋಪವಾಸ ಕ್ರಿಯಾಚಾರವಿಡಿದು, ಜ್ಞಾನವ ಬಳಕೆಯಾಗಿರ್ಪುದೆ ಅಂತರಂಗದ ಚತುರ್ಥಪಾತಕ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.