Index   ವಚನ - 1108    Search  
 
ಕಾಲನ ಕೊಂದಾತನಲ್ಲದೆ ಶುದ್ಧಪ್ರಸಾದಿಯಲ್ಲ. ಕಾಮನ ತಿಂದಾತನಲ್ಲದೆ ಸಿದ್ಧಪ್ರಸಾದಿಯಲ್ಲ. ತ್ರಿಪುರವ ಸುಟ್ಟಾತನಲ್ಲದೆ ಪ್ರಸಿದ್ಧಪ್ರಸಾದಿಯಲ್ಲ. ಕೆಸರಿನಲ್ಲಿ ಕಿಚ್ಚನಿಕ್ಕಿ ಬಸುರ ಬಡಿದುಕೊಂಡಾತಗಲ್ಲದೆ ಈ ತ್ರಿವಿಧ ಪ್ರಸಾದವಿಲ್ಲ ಕಾಣಾ ಗುಹೇಶ್ವರಾ.