ವಚನ - 1109     
 
ಕಾಲಾಗ್ನಿಯೆಂಬ ಕಾಡುಗಿಚ್ಚೆದ್ದು ಲೋಕವ ಸುಟ್ಟಿತ್ತೆಂದಡೆ ಶಿವಶರಣರಂಜರು. ಶಶಿಧರ ಮುನಿದು ಬಿಸುಗಣ್ಣ ತೆಗೆದಡೆ ಶಿವಶರಣರದ ಮನಸಿಗೆ ತಾರರು. ಅಸಮಾಕ್ಷಲಿಂಗವ ತಮ್ಮ ವಶಕ್ಕೆ ತಂದ ಶರಣರು, ಮುನಿದು ಉರಿಗಣ್ಣ ತೆಗೆದಡೆ, ಚತುರ್ದಶ ಭುವನದೊಳಗೆ ಆರೂ ಗುರಿಯಲ್ಲ. ಗುಹೇಶ್ವರಾ, ನಿಮ್ಮ ಅರಿವಿನ ಬೆಳಗು ಬಿಸಿಯಾದಡೆ ಸಿದ್ಧರಾಮಯ್ಯದೇವರೆಂಬ ಶಿವಯೋಗಿಯ ಹೃದಯವೆ ಗುರಿ.