Index   ವಚನ - 10    Search  
 
ಅನಂತಕಾಲ ಎನ್ನ ಒಡಲ ಮರೆಯೊಳಗೆ ಅಡಗಿರ್ದು ಎನಗೆ ಕಾಣಿಸದೆ ಇದ್ದುದು ಇದೇನು ನಿಮ್ಮ ಗಾರುಡವಯ್ಯಾ! ನೀವು ನಿಮ್ಮ ಕರುಣದಿಂದೆ ಎನ್ನ ಒಡಲ ಮರವೆಯ ಒಡೆದು, ಎನ್ನ ಕಣ್ಣ ಮುಂದಣ ಸತ್ತ್ವ-ರಜ-ತಮದ ಪರದೆಯ ಹರಿಯಲೊಡನೆ ನಿಮ್ಮ ನಿತ್ಯದ ನಿಲವ ಕಂಡೆನಯ್ಯ ಅಖಂಡೇಶ್ವರಾ.