Index   ವಚನ - 26    Search  
 
ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ, ಇಂದ್ರಿಯಂಗಳೆಂಬ ಶಾಖೆಶಾಖೆಗೆ ಹಾರಿ, ವಿಷಯಂಗಳೆಂಬ ಹಣ್ಣು ಫಲಂಗಳ ಗ್ರಹಿಸಿ, ಭವದತ್ತ ಮುಖವಾಗಿ ಹೋಗುತ್ತಿದೆ ನೋಡಾ! ಈ ಮನವೆಂಬ ಮರ್ಕಟನ, ನಿಮ್ಮ ನೆನಹೆಂಬ ಪಾಶದಲ್ಲಿ ಕಟ್ಟಿ, ಎನ್ನನುಳುಹಿಕೊಳ್ಳಯ್ಯ ಅಖಂಡೇಶ್ವರಾ.