ವಚನ - 1120     
 
ಕೂರ್ಮನ ಶಿಶುವಿನ ಸ್ನೇಹದಂತಿರಬೇಡಾ ಸಂಗನಬಸವಣ್ಣಾ? ಕಾಕಪಿಕಸಂಧಾನದಂತಿರಬೇಡಾ ಸಂಗನಬಸವಣ್ಣಾ? ಕೊಂಬ ತಪ್ಪದೆ ಹಾಯ್ವ ಕಪಿಯಂತಿರಬೇಡಾ ಸಂಗನಬಸವಣ್ಣಾ? ನೀರು ಕ್ಷೀರವ ಭೇದಿಸಿ ತೆಗೆವ ಹಂಸೆಯಂತಿರಬೇಡಾ ಸಂಗನಬಸವಣ್ಣಾ? ಗುಹೇಶ್ವರಲಿಂಗದಲ್ಲಿ ಅವಧಾನ ತಪ್ಪಿ, ಮರಳಿ ಅರಸಿದಡುಂಟೆ ಹೇಳಾ ಸಂಗನಬಸವಣ್ಣಾ?