Index   ವಚನ - 59    Search  
 
ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನಧಿಕ ನೋಡಾ. ಆತನಿಂದಧಿಕ ಕಂಗಳು ತುಂಬಿ ನೋಡುವಾತ. ಆತನಿಂದಧಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕೃತಂ | ಯಃ ಸ್ಪೃಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದಧಿಕ ನೋಡಾ ಅಖಂಡೇಶ್ವರಾ.