Index   ವಚನ - 65    Search  
 
ಅಣುವಿಂಗೆ ಅಣು ಮಹತ್ತಿಂಗೆ ಮಹತ್ತೆಂದೆನಿಸುವ ಲಿಂಗದೇವನ ಕಂಡೆನಯ್ಯ ಎನ್ನ ಕರಸ್ಥಲದಲ್ಲಿ. ಉಪಮಾತೀತ ವಾಙ್ಮನಕ್ಕಗೋಚರನೆಂದೆನಿಸುವ ಲಿಂಗದೇವನ ಕಂಡೆನಯ್ಯ ಎನ್ನ ಕರಸ್ಥಲದಲ್ಲಿ. ಶ್ರುತಿತತಿಯ ಶಿರದ ಮೇಲೆ ಅತ್ಯತಿಷ್ಠದ್ದಶಾಂಗುಲನೆಂದೆನಿಸುವ ಲಿಂಗದೇವನ ಕಂಡೆನಯ್ಯ ಎನ್ನ ಕರಸ್ಥಲದಲ್ಲಿ. ಭಾವಭರಿತ ಜ್ಞಾನಗಮ್ಯನೆಂದೆನಿಸುವ ಲಿಂಗದೇವನ ಕಂಡೆನಯ್ಯ ಎನ್ನ ಕರಸ್ಥಲದಲ್ಲಿ. ಅಖಂಡೇಶ್ವರನೆಂಬ ಅನಾದಿಪರಶಿವನ ಕಂಡೆನಯ್ಯ ಎನ್ನ ಕರಸ್ಥಲದಲ್ಲಿ.