Index   ವಚನ - 68    Search  
 
ಮುನ್ನ ವಿಟ ಶ್ವೇತನು ಶಿವ ಎಂಬ ಶಬ್ದದಿಂದೆ ಕಾಲನ ಕಂಟಕವ ಗೆಲಿದು ನೀಲಲೋಹಿತನ ಓಲಗದಲ್ಲಿರಲಿಲ್ಲವೆ? ಮುನ್ನ ಸುಕುಮಾರನು ಪರಶಿವಲಿಂಗದರ್ಶನದಿಂದೆ ಯಮನಪುರಿಯ ಬಾಧೆಯ ನೀಗಿ ಹರನ ರಜತಾದ್ರಿಯಲ್ಲಿರಲಿಲ್ಲವೆ? ಮುನ್ನ ಮಾರ್ಕಂಡೇಯನು ಪರಬ್ರಹ್ಮಲಿಂಗವ ಪೂಜಿಸಿ, ಯಮನ ಉರಹರಿದು ಹರನ ಕೈವಲ್ಯವ ಪಡೆಯಲಿಲ್ಲವೆ? ಇದನರಿತು ಸ್ಥಿರವಾಗಿ ಪೂಜಿಸಿ ವರನ ಬೇಡಿರೋ ನಮ್ಮ ಅಖಂಡೇಶ್ವರ ಲಿಂಗದೇವನಲ್ಲಿ.