ವಚನ - 1123     
 
ಕೃತ್ಯಕ್ಕೆ ಬಾರದ ಲಿಂಗವ ಕೃತ್ಯಕ್ಕೆ ತಂದವರಾರೊ? ವಾಙ್ಮನಕ್ಕಗೋಚರ ಲಿಂಗ, ಬೊಟ್ಟಿಡಲೆಡೆದೆರಹಿಲ್ಲದ ಲಿಂಗ! ಪರಾತ್ಪರಗುರು ಕೊಟ್ಟ, ಶಿಷ್ಯ ತೆಗೆದುಕೊಂಡ ಎಂಬ ರಚ್ಚೆಯ ಭಂಡರ ನೋಡಾ ಗುಹೇಶ್ವರಾ.