Index   ವಚನ - 83    Search  
 
ಮಹದೈಶ್ವರ್ಯವು ಕೈಗೂಡುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಪರಮಪವಿತ್ರನೆನಿಸಬೇಕಾದಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಸರ್ವೈಶ್ವರ್ಯ ಸರ್ವಸಿದ್ಧಿ ದೊರೆಕೊಂಬುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಮಹಾಪುಣ್ಯದ ಫಲವು ಪ್ರಾಪ್ತಿಸುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ದಿನದಿನಕ್ಕೆ ಪಾಪ ಪಲ್ಲಟವಪ್ಪಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಅಂಗಕ್ಕೆ ಶ್ರೀ ವಿಭೂತಿಯೇ ಶೃಂಗಾರ ನೋಡಾ. ಅದೆಂತೆಂದೊಡೆ: ಶ್ರೀಕರಂ ಚ ಪವಿತ್ರಂ ಚ ಹಾರಾದ್ಯಾಭರಣಂ ತಥಾ | ಲೋಕವಶ್ಯಕರಂ ಪುಣ್ಯಂ ಪಾಪನಾಶಂ ದಿನೇ ದಿನೇ ||'' ಎಂದುದಾಗಿ, ಇಂತಪ್ಪ ಶ್ರೀ ವಿಭೂತಿಯ ಅಂತರಂಗದಲ್ಲಿ ವಿಶ್ವಾಸ ತುಂಬಿ ಧರಿಸಿದ ಮನುಜರಿಗೆ ಅನಂತಕೋಟಿ ಪಾತಕಂಗಳು ಪರಿಹಾರವಾಗಿ ಮುಂದೆ ಶಿವಸಾಯುಜ್ಯಪದವು ದೊರೆಕೊಂಬುದು ನೋಡಾ ಅಖಂಡೇಶ್ವರಾ.