ವಚನ - 1124     
 
ಕೆಂಡದ ಗಿರಿಯ ಅರಗಿನ ಬಾಣದಲೆಚ್ಚಡೆ ಮರಳಿ ಆ ಬಾಣವನರಸಲುಂಟೆ? ಮಂಜಿನ ಶಿವಾಲಯಕ್ಕೆ ಬಿಸಿಲ ಕಳಸವುಂಟೆ? ಗುಹೇಶ್ವರನೆಂಬ ಲಿಂಗವನರಿದ ಬಳಿಕ ಮತ್ತೆ ಮರಳಿ ನೆನೆಯಲುಂಟೆ?