Index   ವಚನ - 91    Search  
 
ಆವನೊಬ್ಬನು ಉಪಪಾತಕ ಮಹಾಪಾತಕಂಗಳ ಮಾಡಿ, ಶ್ರೀ ರುದ್ರಾಕ್ಷಿಯ ನಾಮೋಚ್ಚರಣೆಯ ಮಾಡಿದಡೆ ಆ ಪಾತಕಂಗಳು ಪರಿಹಾರವಾಗಿ ಹತ್ತುಸಾವಿರ ಗೋದಾನದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಸ್ವರೂಪವನು ಕಂಗಳು ತುಂಬಿ ನೋಡಿದಡೆ ಶತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮುಟ್ಟಿ ಮುಟ್ಟಿ ಪೂಜಿಸಿದಡೆ ಸಹಸ್ರಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ತತ್ ಸ್ಥಾನಂಗಳಲ್ಲಿ ಭಕ್ತಿಯಿಂದೆ ಧರಿಸಿದಡೆ ಲಕ್ಷಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮಣಿಗಳಿಂದೆ ಜಪವ ಮಾಡಿದಡೆ ಅನಂತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಅದೆಂತೆಂದೊಡೆ: ಸಪ್ತಕೋಟಿಶತಂ ಪುಣ್ಯಂ ಲಭತೇ ಧಾರಣಾತ್ ನರಃ | ಲಕ್ಷಕೋಟಿಸಹಸ್ರಾಣಿ ಲಕ್ಷಕೋಟಿಶತಾನಿ ಚ | ತಜ್ಜಪಾತ್ ಲಭತೇ ಪುಣ್ಯಂ ನಾತ್ರ ಕಾರ್ಯವಿಚಾರಣಾ ||' ಎಂದುದಾಗಿ, ಇಂತಪ್ಪ ರುದ್ರಾಕ್ಷಿಯ ಧರಿಸಿದ ಫಲಕ್ಕೆ ಇನ್ನಾವ ಫಲವು ಸರಿಯಿಲ್ಲವೆಂದು ಸಕಲಾಗಮಂಗಳು ಸಾರುತಿಪ್ಪವು ನೋಡಾ ಅಖಂಡೇಶ್ವರಾ.