Index   ವಚನ - 111    Search  
 
ಪಂಚಮಹಾಪಾತಕಂಗಳ ಮಾಡಿದವನಾದಡಾಗಲಿ, ಉಪಪಾತಕಂಗಳ ಕೋಟ್ಯನುಕೋಟಿ ಮಾಡಿದವನಾದಡಾಗಲಿ, ಹತ್ತುಸಾವಿರ ಬ್ರಹ್ಮಹತ್ಯವ ಮಾಡಿದವನಾದಡಾಗಲಿ, ಒಬ್ಬ ಶಿವಭಕ್ತನ ದರ್ಶನವಾದಲ್ಲಿ ಆ ಪಾತಕಂಗಳು ಬೆಂದು ಭಸ್ಮವಾಗಿ ಹೋಗುವವು ನೋಡಾ! ಅದೆಂತೆಂದೊಡೆ: ಲಿಂಗಪುರಾಣೇ- ಉಪಪಾತಕ ಕೋಟೀಶ್ಚ ಬ್ರಹ್ಮಹತ್ಯಾಯುತಾನಿ ಚ | ದಹತ್ಯಶೇಷ ಪಾಪಾನಿ ಶಿವಭಕ್ತಸ್ಯ ದರ್ಶನಂ ||'' ಎಂದುದಾಗಿ, ಶಿವಭಕ್ತನೇ ಶಿವನು ನೋಡಾ ಅಖಂಡೇಶ್ವರಾ.