Index   ವಚನ - 117    Search  
 
ತೆಂಗಿಗೆ ನೀರನೆರೆದರೆ ಅಂಗೈಯಲ್ಲಿ ಫಲವು ಕಾಣುವಂತೆ ಜಂಗಮಕ್ಕೆ ಅನ್ನ ಉದಕಂಗಳ ನೀಡಿದ ಫಲವು ಮೇರುಪರ್ವತಕ್ಕೆ, ಸಪ್ತಸಮುದ್ರಕ್ಕೆ ಸಮಾನವಹುದು. ಅದಲ್ಲದೆ ಒಂದೊಂದು ಅಗುಳಿಗೆ ಕೋಟ್ಯನುಕೋಟಿ ಯಜ್ಞಂಗಳ ಮಾಡಿದ ಫಲವಹುದು. ಅದೆಂತೆಂದೊಡೆ: ಕ್ಷಿಪ್ತಂ ಕ್ಷಿಪ್ತಂ ಮಹಾದೇವಿ ಕೋಟಿಯಜ್ಞಫಲಂ ಭವೇತ್ | ಅಲ್ಪಬೀಜಾತ್ ಮಹಾವೃಕ್ಷೋ ಯಥಾ ಭವತಿ ಪಾರ್ವತೀ ||'' ಮತ್ತಂ, ಅನ್ನಂ ವಾ ಜಲಮಾತ್ರಂ ವಾ ಯದ್ ದತ್ತಂ ಲಿಂಗಧಾರಿಣೇ | ತದನ್ನಂ ಮೇರುಸದೃಶಂ ತಜ್ಜಲಂ ಸಾಗರೋಪಮಮ್ ||'' ಎಂದುದಾಗಿ, ಜಂಗಮದಲ್ಲಿ ನಮ್ಮ ಅಖಂಡೇಶ್ವರಲಿಂಗದ ತೃಪ್ತಿ ನೋಡಾ.