Index   ವಚನ - 118    Search  
 
ಜಂಗಮಕ್ಕೆ ನೀಡಿದ ತೃಪ್ತಿ ಜಗಕೆಲ್ಲ ತೃಪ್ತಿಯಾಯಿತ್ತು ಕಾಣಿರೋ! ಜಂಗಮಕ್ಕೆ ನೀಡಿದ ತೃಪ್ತಿ ಹರಿ ಸುರ ಬ್ರಹ್ಮಾದಿಗಳಿಗೆಲ್ಲ ತೃಪ್ತಿಯಾಯಿತ್ತು ಕಾಣಿರೋ! ಜಂಗಮಕ್ಕೆ ನೀಡಿದ ತೃಪ್ತಿ ಸ್ವರ್ಗ ಮರ್ತ್ಯ ಪಾತಾಳ ಸಚರಾಚರಂಗಳಿಗೆಲ್ಲ ತೃಪ್ತಿಯಾಯಿತ್ತು ನೋಡಿರೋ! ಜಂಗಮಕ್ಕೆ ನೀಡಿದ ತೃಪ್ತಿ ಸಾಕ್ಷಾತ್ಪರಬ್ರಹ್ಮ ಪರಶಿವಂಗೆ ತೃಪ್ತಿಯಾಯಿತ್ತು ನೋಡಿರೋ! ಅದೆಂತೆಂದೊಡೆ: ಸುರತೃಪ್ತಂ ಬುಧಸ್ತೋಮಂ ಮಮ ತೃಪ್ತಂತು ವೈಷ್ಣವಮ್ | ಜಂಗಮಂತು ಜಗತ್ ತೃಪ್ತಂ ಶಿವತೃಪ್ತಂ ತು ಪದ್ಮಿನಿ ||'' ಎಂದುದಾಗಿ, ಇಂತಪ್ಪ ಜಂಗಮ ತೃಪ್ತಿಯಾದಡೆ ನಮ್ಮ ಅಖಂಡೇಶ್ವರಲಿಂಗ ತೃಪ್ತಿಯಾಯಿತ್ತು ನೋಡಿರೋ!