ವಚನ - 1127     
 
ಕೆರೆಯ ಕಟ್ಟಿಸುವ ಒಡ್ಡನ ಪ್ರತಾಪವನೇನೆಂಬೆನಯ್ಯಾ. ನೆಲನನಗಿದು ಜಲವ ಮೊಗೆದಿಹೆನೆಂಬ ಬಳಲಿಕೆಯ ನೋಡಾ. ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೊ? ಗುಹೇಶ್ವರಾ, ಈ ಇರವಿನ ಪರಿಗೆ ಬೆರಗಾದೆನು!