ವಚನ - 1130     
 
ಕೆಳಗೇಳು ಲೋಕಂಗಳಿಲ್ಲದ ಮುನ್ನ, ಮೇಲೇಳು ಲೋಕಂಗಳಿಲ್ಲದ ಮುನ್ನ ಸಮಸ್ತ ಬ್ರಹ್ಮಾಂಡಗಳಿಲ್ಲದ ಮುನ್ನ, ಅಲ್ಲಿಂದತ್ತತ್ತ ಬಸವಣ್ಣಾ ನೀನು ಲಿಂಗಭಕ್ತ, ಜಂಗಮಪ್ರಾಣಿ! ಶಶಿಧರನ ಶರಣಂಗೆ ವೃಷಧರ ಸ್ವಾಯತವಾಗಿ, ನಮ್ಮ ಗುಹೇಶ್ವರಲಿಂಗಕ್ಕೆ ಸಂಗನಬಸವಣ್ಣನೆ ಭಕ್ತನೆಂದರಿದು ನಾನು ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.