Index   ವಚನ - 160    Search  
 
ಶಿವಭಕ್ತನೆನಿಸುವಾತಂಗೆ ಆವುದು ಚಿಹ್ನವೆಂದೊಡೆ: ಸದಾಚಾರದಲ್ಲಿ ನಡೆವುದು, ಶಿವನಲ್ಲಿ ಭಕ್ತಿಯಿಂದಿರುವುದು, ಲಿಂಗಜಂಗಮ ಒಂದೆಯೆಂದು ಕಾಂಬುದು. ವಿಭೂತಿ ರುದ್ರಾಕ್ಷಿ ಲಿಂಗಧಾರಣ ಮುಂತಾದ ಶಿವಲಾಂಛನವನುಳ್ಳ ಶಿವಶರಣರಲ್ಲಿ ಅತಿಭಕ್ತಿಯಾಗಿರ್ಪಾತನೇ ಸದ್ ಭಕ್ತ ನೋಡಾ! ಅದೆಂತೆಂದೊಡೆ: ಸಾದಾಚಾರಃ ಶಿವೇ ಭಕ್ತಿರ್ಲಿಂಗೇ ಜಂಗಮ ಏಕಧೀಃ| ಲಾಂಛನೇ ಶರಣೇ ಭಕ್ತಿಃ ಭಕ್ತಸ್ಥಲಮನುತ್ತಮಮ್ ||'' ಎಂದುದಾಗಿ, ಇಂತಪ್ಪ ಸಹಜ ಭಕ್ತರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.