Index   ವಚನ - 177    Search  
 
ಸೋಹಂ ಎಂದಡೆ ಅಂತರಂಗದ ಗರ್ವ; ಶಿವೋಹಂ ಎಂದಡೆ ಬಹಿರಂಗದ ಅಹಂಕಾರ; ಈ ಉಭಯವನಳಿದು ದಾಸೋಹಂ ಎಂದಡೆ ಪರಮಪದವು. ಇದು ಕಾರಣ, ಎನಗೆ ದಾಸೋಹಂ ಭಾವವನೆ ಕರುಣಿಸಿ ಬದುಕಿಸಯ್ಯ ಅಖಂಡೇಶ್ವರಾ.