Index   ವಚನ - 182    Search  
 
ಬ್ರಾಹ್ಮಣನಾಗಲಿ ಕ್ಷತ್ರಿಯನಾಗಲಿ ವೈಶ್ಯನಾಗಲಿ ಶೂದ್ರನಾಗಲಿ ಆವಜಾತಿಯಲ್ಲಿ ಹುಟ್ಟಿದಾತನಾದಡಾಗಲಿ, ಗುರುಕಾರುಣ್ಯವ ಪಡೆದು ಅಂಗದ ಮೇಲೆ ಲಿಂಗಧಾರಣವಾಗಿ ಆಚಾರಕ್ರಿಯಾಸಂಪನ್ನನಾದ ಮಹಾತ್ಮನೇ ಮೂರುಲೋಕಕ್ಕಧಿಕ ನೋಡಾ! ಅದೆಂತೆಂದೊಡೆ: ಬ್ರಾಹ್ಮಣಃ ಕ್ಷತ್ರಿಯೋ ವೈಶ್ಯಃ ಶೂದ್ರೋ ವಾಪ್ಯಂತ್ಯಜೋsಪಿ ವಾ | ಶಿವಭಕ್ತಃ ಸದಾ ಪೂಜ್ಯಃ ಸರ್ವಾವಸ್ಥಾಂ ಗತೋsಪಿ ವಾ ||'' ಎಂದುದಾಗಿ, ಇಂತಪ್ಪ ಪರಮ ಶಿವಭಕ್ತನು ಶರಣ ನೋಡಾ ಅಖಂಡೇಶ್ವರಾ.