Index   ವಚನ - 217    Search  
 
ಮೊಟ್ಟೆ ಮೊಟ್ಟೆ ಪತ್ರಿ ಪುಷ್ಪವ ತಂದು ಒಟ್ಟಿ ಒಟ್ಟಿ ಲಿಂಗವ ಪೂಜಿಸಿದಡೇನು, ತನುಮನದ ಕೆಟ್ಟತನವ ಹಿಂಗದನ್ನಕ್ಕರ? ಹುಸಿ ಕಳವು ಪರದಾರ ವ್ಯವಹಾರದಲ್ಲಿ ಹರಿದಾಡುವ ದುರುಳಬುದ್ಧಿಯ ದುರಾಚಾರಿಗಳಿಗೆ ದೂರನಾಗಿರ್ಪನು ನೋಡಾ ನಮ್ಮ ಅಖಂಡೇಶ್ವರನು.