Index   ವಚನ - 219    Search  
 
ಹೊರಗೆ ಹೊನ್ನ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಹೊರಗೆ ಹೆಣ್ಣ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ, ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಹೊರಗೆ ಮಣ್ಣ ಬಿಟ್ಟೆನೆಂದು ನುಡಿವುತಿರ್ಪೆನಲ್ಲದೆ, ಒಳಗೆ ಬಿಟ್ಟು ನಿಶ್ಚಿಂತನಲ್ಲವಯ್ಯ ನಾನು. ಇಂತಪ್ಪ ಏಕಾಂತದ್ರೋಹಿ ಗುಪ್ತಪಾತಕಂಗೆ- ಅಖಂಡೇಶ್ವರನು ಒಲಿ ಎಂದೊಡೆ ಎಂತೊಲಿವನಯ್ಯ ಎನಗೆ?