ವಚನ - 1138     
 
ಕೌಪು ಕಾಷಾಯಾಂಬರವ ಕಟ್ಟಿ, ಮಂಡೆ ಬೋಳಾದಡೇನಯ್ಯಾ. ಎನ್ನಲ್ಲಿ ನಿಜವಿಲ್ಲದನ್ನಕ್ಕ? ಹೊನ್ನು ಹೆಣ್ಣು ಮಣ್ಣು ತ್ರಿವಿಧವ ತೊರೆದಡೇನಯ್ಯಾ ಮನದಲ್ಲಿ ವ್ರತಿಯಾಗದನ್ನಕ್ಕ? ಹಸಿವು ತೃಷೆ ವ್ಯಸನಾದಿಗಳ ಬಿಟ್ಟಡೇನಯ್ಯಾ ಅರ್ಥದಿಚ್ಛೆ ಮನದಲ್ಲಿ ಹಿಂಗದನ್ನಕ್ಕ? ಆನು ಜಂಗಮವೆ? ಆನು ಹಿರಿಯನಾದೆನಲ್ಲದೆ ಆನು ಜಂಗಮವೆ? ಒಡಲಿಲ್ಲದಾತ ಬಸವಣ್ಣ, ಪ್ರಾಣವಿಲ್ಲದಾತ ಬಸವಣ್ಣ. [ಎನ್ನ]ಬಸವಣ್ಣನಾಗಿ ಹುಟ್ಟಿಸದೆ ಪ್ರಭುವಾಗಿ ಏಕೆ ಹುಟ್ಟಿಸಿದೆ ಗುಹೇಶ್ವರಾ?