Index   ವಚನ - 242    Search  
 
ಎನ್ನ ಕರಕಮಲಮಧ್ಯದಲ್ಲಿ ಪರಮ ಶಿವಲಿಂಗವ ತುಂಬಿ, ಆ ಲಿಂಗದ ಮಧ್ಯದಲ್ಲಿ ಕಂಗಳ ತುಂಬಿ, ಆ ಕಂಗಳ ಮಧ್ಯದಲ್ಲಿ ಮನವ ತುಂಬಿ, ಆ ಮನದ ಮಧ್ಯದಲ್ಲಿ ಭಾವವ ತುಂಬಿ, ಪರವಶನಾಗಿರ್ದೆನಯ್ಯ ನಿಮ್ಮೊಳಗೆ ಅಖಂಡೇಶ್ವರಾ.