Index   ವಚನ - 243    Search  
 
ಪ್ರಾಣವು ಲಿಂಗವ ನುಂಗಿತ್ತೋ, ಲಿಂಗವು ಪ್ರಾಣವ ನುಂಗಿತ್ತೋ ಎಂದರಿಯೆನಯ್ಯ. ಭಾವವು ಲಿಂಗದಲ್ಲಿ ತುಂಬಿತ್ತೋ, ಲಿಂಗವು ಭಾವದಲ್ಲಿ ತುಂಬಿತ್ತೋ ಎಂದರಿಯೆನಯ್ಯ. ಮನವು ಲಿಂಗದಲ್ಲಿ ಮುಳುಗಿತ್ತೊ, ಲಿಂಗವು ಮನದಲ್ಲಿ ಮುಳುಗಿತ್ತೋ ಎಂದರಿಯೆನಯ್ಯ. ಅಖಂಡೇಶ್ವರಾ, ನಿಮ್ಮ ಕೂಡುವ ವಿಕಳಾವಸ್ಥೆಯಲ್ಲಿ ಏನೇನೂ ಅರಿಯದಿರ್ದೆನಯ್ಯ.