ವಚನ - 1140     
 
ಕ್ರಿಯಾಮಥನವಿಲ್ಲದೆ ಕಾಣಬಂದುದೆ ಇಕ್ಷುವಿನೊಳಗಣ ಮಧುರ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ತಿಲದೊಳಗಣ ತೈಲ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕ್ಷೀರದೊಳಗಣ ಘೃತ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕಾಷ್ಟದೊಳಗಣ ಅಗ್ನಿ? ಇದು ಕಾರಣ, ನಮ್ಮ ಗುಹೇಶ್ವರಲಿಂಗವ ತನ್ನೊಳರಿದೆನೆಂಬ ಮಹಂತಂಗೆ ಸತ್‍ಕ್ರಿಯಾಚರಣೆಯೆ ಸಾಧನ ಕಾಣಿಭೋ.