Index   ವಚನ - 274    Search  
 
ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು, ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ: ಪೂರ್ಣಾಯುಷ್ಯವು, ವಿಮಲಮತಿಯು, ಸತ್ಕೀರ್ತಿಯು, ಮಹಾಬಲವು, ಕೆಟ್ಟು ಹೋಗುತ್ತಿಹುದು ನೋಡಾ! ಅದೆಂತೆಂದೊಡೆ: ಬ್ರಹ್ಮಾಂಡಪುರಾಣೇ ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ | ಚತ್ವಾರಿ ತಸ್ಯ ನಶ್ಯಂತಿ ಆಯುಃ ಪ್ರಜ್ಞಾ ಯಶೋ ಬಲಮ್ ||'' ಎಂದುದಾಗಿ, ಸತ್ತು ಹುಟ್ಟುವ ಹರಿಗೆ ಇನ್ನೆತ್ತಣ ದೇವತ್ವ ಹೇಳಾ ಅಖಂಡೇಶ್ವರಾ?