Index   ವಚನ - 283    Search  
 
ಸುಖ ಬಂದಲ್ಲಿ ನಿಮ್ಮ ಹಾಡಿಹರಸುವೆನಯ್ಯ. ದುಃಖ ಬಂದಲ್ಲಿ ನಿಮ್ಮ ಕೋಪಿಸಿ ಬಯ್ವೆನಯ್ಯ. ಅದೇನು ಕಾರಣವೆಂದೊಡೆ: ಎನ್ನ ಸುಖದುಃಖಂಗಳಿಗೆ ನೀವೆ ಆಧಾರವಾದ ಕಾರಣ, ನಿಮ್ಮನೆ ಹಾಡುವೆನಯ್ಯ; ನಿಮ್ಮನೆ ಹೊಗಳುವೆನಯ್ಯ. ನಿಮ್ಮ ಮುಂದೆ ಎನ್ನ ಒಡಲ ಕಡು ದುಃಖವನೀಡಾಡುವೆನಯ್ಯ ಅಖಂಡೇಶ್ವರಾ.