Index   ವಚನ - 1148    Search  
 
ಗಗನಪನವದ ಮೇಲೆ ಉದಯಮುಖದನುಭಾವ, ಸದಮದದ ಗಜವ ನಿಲಿಸುವ ಮಾವತಿಗ ಬಂದ. ಅಷ್ಟದಳಕಮಲದೊಳು ಸೃಷ್ಟಿಯಂಕುರ ಭಜನೆ; ಮೆಟ್ಟಿ ನಿಂದಾತ ಪರಮಯೋಗಿಯಾಗದೆ ಮಾಣ! ಬಯಲ ಬಣ್ಣವ ತುಂಬಿ, ನೆಳಲ ಶೃಂಗಾರವ ಮಾಡಿದ ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ಶರಣೆನುತಿರ್ದೆನು.