ವಚನ - 1149     
 
ಗತಿಗೆಟ್ಟೆ ಧೃತಿಗೆಟ್ಟೆ ಮತಿಗೆಟ್ಟೆ ನಾನಯ್ಯಾ. ನಡೆವಡೆ ಶಕ್ತಿಯಿಲ್ಲ, ನುಡಿವಡೆ ಜಿಹ್ವೆಯಿಲ್ಲ. ಇದಿರಲೊಬ್ಬರ ಉಪಚಾರ ಸೇರದು ನೋಡಾ ಎಮಗೆ. ಬಂದ ಬರವನರಿದು, ನಿಂದ ನಿಲವನರಿದು, ಕೂಡಬಲ್ಲ ಶರಣಂಗೆ, ಬೇರೊಂದು ಏಕಾಂತವೆಂಬ ಸಂದೇಹ ಉಂಟೆ? ತೆರಹಿಲ್ಲದ ಘನವನೊಳಕೊಂಡ ಬಳಿಕ ಬರಲೆಡೆಯುಂಟೆ ನಮ್ಮ ಗುಹೇಶ್ವರಲಿಂಗಕ್ಕೆ?