Index   ವಚನ - 392    Search  
 
ಗುರುಪ್ರಸಾದವ ಕೊಂಡು ತನ್ನ ತನು ಶುದ್ಧಪ್ರಸಾದವಾಯಿತ್ತು. ಲಿಂಗಪ್ರಸಾದವ ಕೊಂಡು ಎನ್ನ ಮನ ಸಿದ್ಧಪ್ರಸಾದವಾಯಿತ್ತು. ಜಂಗಮಪ್ರಸಾದವ ಕೊಂಡು ಎನ್ನ ಪ್ರಾಣವು ಪ್ರಸಿದ್ಧಪ್ರಸಾದವಾಯಿತ್ತು. ಇಂತೀ ತ್ರಿವಿಧಪ್ರಸಾದವ ಕೊಂಡು ಎನ್ನ ಭವ ನಾಸ್ತಿಯಾಗಿತ್ತಾಗಿ, ಅಖಂಡೇಶ್ವರಾ, ಇನ್ನೆನಗೆ ಆವಾವ ಭಯವಿಲ್ಲವಯ್ಯ.