Index   ವಚನ - 397    Search  
 
ಗುರುಭಕ್ತಿಯ ಮಾಡಿದರೆ ಮಾಡಬಹುದು; ಲಿಂಗಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಲಿಂಗಭಕ್ತಿಯ ಮಾಡಿದರೆ ಮಾಡಬಹುದು; ಜಂಗಮಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಜಂಗಮಭಕ್ತಿಯ ಮಾಡಿದರೆ ಮಾಡಬಹುದು, ಪ್ರಸಾದಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಇಂತೀ ಚತುರ್ವಿಧ ಭಕ್ತಿಯ ಭೇದವನರಿದು ಇಂಬುಗೊಂಡ ಸಂಗನಬಸವಣ್ಣನೆಂಬ ಸದ್ ಭಕ್ತಂಗೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.