ಪವನವೆ ಅಂಗವಾದ ಪ್ರಾಣಲಿಂಗಿಗೆ ಸುಮನವೆ ಹಸ್ತ;
ಆ ಹಸ್ತಕ್ಕೆ ಆದಿಶಕ್ತಿ, ಆ ಶಕ್ತಿಗೆ ಜಂಗಮಲಿಂಗ,
ಆ ಲಿಂಗಕ್ಕೆ ತ್ವಗಿಂದ್ರಿಯವೆ ಮುಖ,
ಆ ಮುಖಕ್ಕೆ ಸ್ಪರ್ಶನಪದಾರ್ಥ; ಆ ಪದಾರ್ಥವನು
ತ್ವಕ್ಕಿನಲ್ಲಿಹ ಜಂಗಮಲಿಂಗಕ್ಕೆ ಅನುಭಾವಭಕ್ತಿಯಿಂದರ್ಪಿಸಿ,
ಆ ಸುಸ್ಪರ್ಶನ ಪ್ರಸಾದವನು ಪಡೆದು ಸುಖಿಸುವಾತನೆ
ಪ್ರಾಣಲಿಂಗಿಯಯ್ಯಾ ಅಖಂಡೇಶ್ವರಾ.