Index   ವಚನ - 411    Search  
 
ಆತ್ಮವೆ ಅಂಗವಾದ ಐಕ್ಯಂಗೆ ಸದ್ ಭಾವವೆ ಹಸ್ತ ಆ ಹಸ್ತಕ್ಕೆ ಚಿಚ್ಛಕ್ತಿ, ಆ ಶಕ್ತಿಗೆ ಮಹಾಲಿಂಗ, ಆ ಲಿಂಗಕ್ಕೆ ಹೃದಯೇಂದ್ರಿಯವೆ ಮುಖ, ಆ ಮುಖಕ್ಕೆ ಸುತೃಪ್ತಿ ಪದಾರ್ಥ; ಆ ಪದಾರ್ಥವನು ಹೃದಯದಲ್ಲಿಹ ಮಹಾಲಿಂಗಕ್ಕೆ ಸಮರಸಭಕ್ತಿಯಿಂದರ್ಪಿಸಿ, ಆ ಪದಾರ್ಥವನು ಹೃದಯಲ್ಲಿಹ ಮಹಾಲಿಂಗಕ್ಕೆ ಸಮರಸ ಭಕ್ತಿಯಿಂದರ್ಪಿಸಿ ಆ ಸುತೃಪ್ತಿಪ್ರಸಾದವನು ಪಡೆದು ಸುಖಿಸುವಾತನೆ ಐಕ್ಯನು ನೋಡಾ ಅಖಂಡೇಶ್ವರಾ.