Index   ವಚನ - 429    Search  
 
ಕಾಯವಿಲ್ಲದ ಪುರುಷನು ಕಸವಿಲ್ಲದ ಭೂಮಿಯಲ್ಲಿ ಕಾಮಿತವಿಲ್ಲದ ಬೀಜವ ಬಿತ್ತಲು ಅದು ಅಂಕುರಿಸಿ ಎಲೆ ಎರಡಾಯಿತ್ತು; ಶಾಖೆ ಮೂರಾಯಿತ್ತು; ತಳಿರು ಆರಾಯಿತ್ತು; ಕುಸುಮ ಮೂವತ್ತಾರಾಯಿತ್ತು; ಕಾಯಿ ಇನ್ನೂರಹದಿನಾರಾಯಿತ್ತು; ಹಣ್ಣು ವಿಶ್ವಪರಿಪೂರ್ಣವಾಯಿತ್ತು. ಅದು ಅಖಂಡ ರಸತುಂಬಿ ಬಟ್ಟಬಯಲಲ್ಲಿ ತೊಟ್ಟುಬಿಟ್ಟಿತ್ತು ಆ ಹಣ್ಣ ನಾನು ಕಣ್ಣಿಲ್ಲದೆ ನೋಡಿ, ಕೈಯಿಲ್ಲದೆ ಮುಟ್ಟಿ, ಬಾಯಿಲ್ಲದೆ ಸವಿದು, ಮನವಿಲ್ಲದೆ ಪರಿಣಾಮಿಸಿದೆನಾಗಿ, ಅಖಂಡೇಶ್ವರನು ತನ್ನೊಳಗೆ ಇಂಬಿಟ್ಟುಕೊಂಡನು.