Index   ವಚನ - 448    Search  
 
ಪರಾತ್ಪರವಾದ ವಸ್ತುವನೊಡಗೂಡಿದ ಪ್ರಾಣಲಿಂಗಿಯ ಒಡಲ ಬೆಡಗಿನ ಗಡಣವೆಂತಿರ್ಪುದೆಂದಡೆ: ಸ್ಫಟಿಕದ ಘಟದೊಳಗೆ ಜ್ಯೋತಿಯನಿರಿಸಿದಂತೆ, ಕತ್ತಲೆಯ ಮನೆಯಲ್ಲಿ ರತ್ನವ ಹರಡಿದಂತೆ, ರನ್ನದ ಗಿರಿಗೆ ರವಿಕೋಟಿ ಕಿರಣಂಗಳು ಮುಸುಕಿದಂತೆ, ಬೆಳಗು ಹಳಚಿದ ಮಹಾಬೆಳಗಿನೊಬ್ಬುಳಿಯನೊಳಕೊಂಡು ಘನಗಂಭೀರವಾದ ಪ್ರಾಣಲಿಂಗಿಗಳ ಪಾದಕಮಲದಲ್ಲಿ ಸದಮಲ ತುಂಬಿಯಾಗಿರಿಸಯ್ಯಾ ಎನ್ನ ಅಖಂಡೇಶ್ವರಾ.