Index   ವಚನ - 468    Search  
 
ಶುದ್ಧಪದ್ಮಾಸನದಲ್ಲಿ ಕುಳ್ಳಿರ್ದು ಊರ್ಧ್ವಲೋಚನನಾಗಿ, ಉಲಿವ ಕರಣಂಗಳನೆಲ್ಲ ಉನ್ಮನಿಯ ಸ್ಥಾನದಲ್ಲಡಗಿಸಿ, ಮನವನೊಮ್ಮನವ ಮಾಡಿ ಅನಾಹತಕರ್ಣದಲ್ಲಿ ಲಾಲಿಸಲು, ಸಹಸ್ರದಳಕಮಲಮಧ್ಯದಲ್ಲಿ ಉದ್ಘೋಷಿಸುತ್ತಿರ್ಪುದು ಸುನಾದಬ್ರಹ್ಮವು. ಅಂತಪ್ಪ ಸುನಾದಬ್ರಹ್ಮದಲ್ಲಿ ಮನವಡಗಿ ಮೈಮರೆದಿರ್ಪಾತನೆ ಘನಲಿಂಗಯೋಗಿಯಯ್ಯಾ ಅಖಂಡೇಶ್ವರಾ.