Index   ವಚನ - 1163    Search  
 
ಗುರುವೊಂದೆ ಬಸಿರು, ಲಿಂಗ ಒಂದೆ ಬಸಿರು. ಜಂಗಮ ಒಂದೆ ಬಸಿರು ಪ್ರಸಾದ ಒಂದೆ ಬಸಿರು. ಇದನಾರಯ್ಯಾ ಅಮಳೋಕ್ಯವ ಮಾಡಿ ತೋರಿದವರು? ಇದನಾರಯ್ಯಾ ಪ್ರಜ್ವಲಿತವ ಮಾಡಿ ಬೇರೆ ತೋರಿದವರು? ಪೂರ್ವಾಚಾರಿ ಭಕ್ತಿಭಾಂಡಾರಿ ಬಸವಣ್ಣಾ ಎನಗೆ ನೀನು ಗುಹೇಶ್ವರಲಿಂಗವ ತೋರಿದೆಯಾಗಿ ಲೋಕಾದಿಲೋಕವೆಲ್ಲವು ಎನಗೆ ಕಿಂಚಿತ್.