Index   ವಚನ - 512    Search  
 
ಎನ್ನ ಆಧಾರಚಕ್ರವೆ ಶ್ರೀಶೈಲಕ್ಷೇತ್ರ: ಅಲ್ಲಿರ್ಪ ಆಚಾರಲಿಂಗವೇ ಶ್ರೀಮಲ್ಲಿಕಾರ್ಜುನದೇವರು. ಎನ್ನ ಸ್ವಾಧಿಷ್ಠಾನಚಕ್ರವೆ ಸೇತುಬಂಧಕ್ಷೇತ್ರ; ಅಲ್ಲಿರ್ಪ ಗುರುಲಿಂಗವೆ ರಾಮೇಶ್ವರನು. ಎನ್ನ ಮಣಿಪೂರಕ ಚಕ್ರವೇ ಪಂಪಾಕ್ಪೇತ್ರ; ಅಲ್ಲಿರ್ಪ ಶಿವಲಿಂಗವೆ ವಿರೂಪಾಕ್ಷೇಶ್ವರನು. ಎನ್ನ ಅನಾಹತಚಕ್ರವೇ ಹಿಮವತ್ಕೇದಾರಕ್ಷೇತ್ರ; ಅಲ್ಲಿರ್ಪ ಜಂಗಮಲಿಂಗವೆ ಹಿಮಗಿರೀಶ್ವರನು. ಎನ್ನ ವಿಶುದ್ಧಿಚಕ್ರವೆ ಅವಿಮುಕ್ತಿಕ್ಷೇತ್ರ: ಅಲ್ಲಿರ್ಪ ಪ್ರಸಾದಲಿಂಗವೆ ವಿಶ್ವೇಶ್ವರನು. ಎನ್ನ ಆಜ್ಞಾಚಕ್ರವೆ ಸಂಗಮಕ್ಷೇತ್ರ: ಅಲ್ಲಿರ್ಪ ಮಹಾಲಿಂಗವೆ ಸಂಗಮೇಶ್ವರನು. ಇಂತಿವು ಮೊದಲಾದ ಸಕಲಕ್ಷೇತ್ರಂಗಳನೊಳಕೊಂಡ ಎನ್ನ ಬ್ರಹ್ಮಚಕ್ರವೆ ಮಹಾಕೈಲಾಸ. ಅಲ್ಲಿರ್ಪ ನಿಷ್ಕಲಲಿಂಗವೆ ಅನಾದಿ ಪರಶಿವನು ನೀನೇ ಅಯ್ಯಾ ಅಖಂಡೇಶ್ವರಾ.