ವಚನ - 1169     
 
ಘಟಪಟದ ಭಿತ್ತಿಯಂತೆ ಭಿನ್ನವೆಂಬ ಹಾಂಗೆ ಇಹುದು. ತಿಳಿದು ನೋಡಿದಡೆ ಭಿನ್ನವುಂಟೆ? ಘಟದೊಳಗಣ ಬಯಲು, ಪಟದೊಳಗಣ ನೂಲು, ಭಿತ್ತಿಯ ಮೃತ್ತಿಕೆಯಂತೆ ಒಂದಲ್ಲದೆ ಎರಡಿಲ್ಲ. ದೇಹಿಗಳೊಳಗೆ ಗುಹೇಶ್ವರನಲ್ಲದೆ ಮತ್ತಾರೂ ಇಲ್ಲ.