Index   ವಚನ - 550    Search  
 
ಕಾಮದ ಕಳವಳದಲ್ಲಿ ಕಂಗೆಡುವನಲ್ಲ ಶರಣ. ಜೀವನುಪಾಧಿಕೆಯ ಹೊದ್ದವನಲ್ಲ ಶರಣ. ಭಾವದ ಭ್ರಮೆಯಲ್ಲಿ ಸುಳಿವನಲ್ಲ ಶರಣ. ಮನದ ಮರವೆಯಲ್ಲಿ ಮಗ್ನನಲ್ಲ ಶರಣ. ಕರಣಂಗಳ ಕತ್ತಲೆಯಲ್ಲಿ ಸುತ್ತಿ ಬೀಳುವನಲ್ಲ ಶರಣ. ಇಂದ್ರಿಯಂಗಳ ವಿಕಾರದಲ್ಲಿ ಹರಿದಾಡುವನಲ್ಲ ಶರಣ. ಪರತರಲಿಂಗದ ಬೆಳಗಿನೊಳಗೆ ಬೆರೆದು ತೆರಹಿಲ್ಲದೆ ಬೆಳಗುವ ಪರಮಗಂಭೀರ ಶರಣನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.