ವಚನ - 1171     
 
ಘನವ ನೆನೆವ ಮನದಲ್ಲಿ ತನುವಿನಾಸೆ ಮುನ್ನಿಲ್ಲ, ನೆನೆವ ಮನವನೊಳಕೊಂಡ ಘನವನೇನೆಂಬೆನಯ್ಯಾ! ತನ್ನಲ್ಲಿ ತಾನೆಯಾಗಿತ್ತು! ನೆನಹಳಿದ ನಿರಾಳವ ಕಂಡು ಬೆರಗಾದೆ! ಅಂತು ಇಂತು ಎನಲಿಲ್ಲ. ಚಿಂತೆಯಿಲ್ಲದ ಘನಗುಹೇಶ್ವರಯ್ಯನ ಬೆರಸಲಿಲ್ಲ.