Index   ವಚನ - 586    Search  
 
ಬಾರನೇತಕವ್ವಾ ನಮ್ಮನೆಯಾತ? ತೋರನೇತಕವ್ವಾ ತನ್ನ ದಿವ್ಯರೂಪವ? ಬೀರನೇತಕವ್ವಾ ಅತಿಸ್ನೇಹವ? ಇನ್ನೆಂತು ಸೈರಿಸುವೆನವ್ವಾ. ಹೇಗೆ ತಾಳುವೆನವ್ವಾ. ತನು ತಾಪಗೊಳ್ಳುತ್ತಿದೆ, ಮನ ತಲ್ಲಣವಾಗುತ್ತಿದೆ. ಅಖಂಡೇಶ್ವರನೆಂಬ ನಲ್ಲನ ತೋರಿಸಿ ಎನ್ನ ಪ್ರಾಣವನುಳುಹಿಕೊಳ್ಳಿರವ್ವಾ.