ವಚನ - 1177     
 
ಚಿನ್ನವನೊರೆಯಬಹುದಲ್ಲದೆ ಬಣ್ಣವನೊರೆಯಬಹುದೆ? ಹೂವ ಮುಡಿಯಬಹುದಲ್ಲದೆ ಗಂಧವ ಮುಡಿಯಬಹುದೆ? ಕರ್ಮವ ಮಾಡಬಹುದಲ್ಲದೆ ವಸ್ತುವನರಿಯಬಹುದೆ? ಗುಹೇಶ್ವರನೆನಬಹುದಲ್ಲದೆ, ಲಿಂಗವು ತಾನಾಗಬಾರದು ಸಿದ್ಧರಾಮಯ್ಯಾ.