Index   ವಚನ - 625    Search  
 
ವಿರಕ್ತನೆನಿಸುವಂಗಾವುದು ಚಿಹ್ನವೆಂದೊಡೆ: ವಿಷಯವಿಕಾರವ ಸುಟ್ಟಿರಬೇಕು. ಬಯಕೆ ನಿರ್ಬಯಕೆಯಾಗಿರಬೇಕು. ಸ್ತ್ವರಜತಮವೆಂಬ ತ್ರೈಗುಣಂಗಳನಿಟ್ಟೊರಸಿರಬೇಕು. ಅದೆಂತೆಂದೊಡೆ: ವಿಕಾರಂ ವಿಷಯಾತ್‍ದೂರಂ ರಕಾರಂ ರಾಗವರ್ಜಿತಂ | ತಕಾರಂ ತ್ರೈಗುಣಂ ನಾಸ್ತಿ ವಿರಕ್ತಸ್ಯ ಸುಲಕ್ಷಣಂ ||'' ಇಂತಪ್ಪ ವಿರಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.