ವಚನ - 1180     
 
ಜಂಗಮ ಜಂಗಮವೆಂಬ ಭಂಗಿತರ ಮುಖವ ನೋಡಲಾಗದು. ಅದೇನು ಕಾರಣವೆಂದಡೆ- ನಿರಾಳಜಂಗಮವನರಿಯದೆ ನಾನೆ ಜಂಗಮವೆಂಬರು. ಗ್ರಂಥ ``ಜಕಾರಂ ಜನನಂ ನಾಸ್ತಿ ಗಕಾರಂ ಗಮನವರ್ಜಿತಂ| ಮಕಾರಂ ಮರಣಂ ನಾಸ್ತಿ ಏತದ್ಭವ್ಜೇಂಗಮಂ|| ಎಂದುದಾಗಿ, ಇಂತಪ್ಪ ನಿರ್ದೇಹಿ ಜಂಗಮವ ಕರ-ಮನ-ಭಾವದಲ್ಲಿ ಆರಾಧಿಸಿ ಜನನ ಮರಣಂಗಳ ಗೆಲಿದು ಕರ್ಪುರದ ಜ್ಯೋತಿಯಂತೆ ಇರಬಲ್ಲಡೆ ಆ ಮಹಾತ್ಮನೆ ತ್ರೈಜಗದೊಡೆಯನೆಂಬೆ, ಆ ಮಹಾತ್ಮನೆ ವಿಶ್ವಪರಿಪೂರ್ಣನೆಂಬೆ ಗುಹೇಶ್ವರಾ.