Index   ವಚನ - 668    Search  
 
ಲಿಂಗದೊಡನೆ ಸಹಭೋಜನ ಮಾಡುವ ಲಿಂಗವಂತರೆಲ್ಲ ನೀವು ಕೇಳಿರೊ! ನಿಮ್ಮ ತನು ಸಂಸಾರವಿಷಯಪ್ರಪಂಚಿನಲ್ಲಿ ಮುಳುಗಿರ್ಪುದು. ನಿಮ್ಮ ಮನ ಮಾಯಾ ಮಲತ್ರಯಂಗಳಲ್ಲಿ ಸುತ್ತಿರ್ಪುದು. ನಿಮ್ಮ ಜೀವ ಭವಭವದಲ್ಲಿ ತೊಳಲುತಿರ್ಪುದು. ನೀವಿಂತು ಮಲಮಾಯಾಸ್ವರೂಪರಾಗಿರ್ದು ಭಯವಿಲ್ಲದೆ ಅಮಲಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರ ನರಕದಲ್ಲಿಕ್ಕದೆ ಮಾಣ್ಬನೆ ನಮ್ಮ ಅಖಂಡೇಶ್ವರನು?