ವಚನ - 1184     
 
ಜಂಗಮವೆ ಹೊರಗಿರಲು ಲಿಂಗಾರ್ಚನೆ ಏವುದಯ್ಯಾ? ಪ್ರಾಣನ ಹೊರಗಿರಿಸಿ ಎಡೆಯಾಡುವ ದೇಹವುಂಟೆ? ಶರಣರು ಬಂದು ಬಾಗಿಲಲ್ಲಿ ನಿಂದಿರಲು ತನ್ನ ತಾ ಮರೆದಿಪ್ಪವರ ಕಂಡಡೆ ನಮ್ಮ ಗುಹೇಶ್ವರಲಿಂಗ ಒಡೆಯ ಹಾಯ್ಕದೆ ಮಾಣ್ಬನೆ?